ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

Public TV
2 Min Read

– 30ಕ್ಕೂ ಹೆಚ್ಚು ಮಂದಿಗೆ ಗಾಯ

ಕುವೈತ್‌: ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ದುರಂತರದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಸಾವನ್ನಪ್ಪಿದ ಘಟನೆ ಕುವೈತ್‌ನ (Kuwait) ಮಂಗಾಫ್ ನಗರದಲ್ಲಿ (Mangaf City) ನಡೆದಿದೆ.

ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡ ಸುಮಾರು 43ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಘಡದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಗ್ನಿ ಅವಘಡದಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣದಲ್ಲಿ ಭಾರೀ ಮಳೆ – ಕೆರೆ ಒಡೆದು ರೈತರ ಜಮೀನಿಗೆ ನುಗ್ಗಿದ ನೀರು

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಿಸಿದ್ದು, ಅಧಿಕಾರಿಗಳು ಘಟನೆಗೆ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

Share This Article