ಲಾರಿ, ಕಾರು ನಡುವೆ ಭೀಕರ ಅಪಘಾತ – ಮಗು ಸೇರಿದಂತೆ ನಾಲ್ವರ ದುರ್ಮರಣ

Public TV
1 Min Read

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Car Accident) ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ (Bengaluru) ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28), ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ಫಾರ್ಚುನರ್ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮಗು ಹಾಗೂ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 8 ನಕ್ಸಲರು ಬಲಿ – ಓರ್ವ ಯೋಧ ಹುತಾತ್ಮ

ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ (Davanagere) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

Share This Article