2ನೇ ಅತ್ಯಾಚಾರ ಪ್ರಕರಣ – ಪ್ರಜ್ವಲ್‍ಗೆ ಮತ್ತೆ ಮೆಡಿಕಲ್ ಟೆಸ್ಟ್

Public TV
2 Min Read

– ವಿದೇಶಿ FSL ತಜ್ಞರ ನೆರವು ಪಡೆಯಲು ಮುಂದಾದ ಎಸ್‍ಐಟಿ?

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ (Medical Examination) ನಡೆಸಲಾಗಿದೆ.

ವಿಡಿಯೋದಲ್ಲಿ ಕಾಣಿಸಿದ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳ ತಂಡ ಚಿಂತನೆ ನಡೆಸಿದೆ. ಈ ಪರೀಕ್ಷೆಗೆ ಗುಜರಾತ್‍ನ ಅಹಮದಾಬಾದ್‍ನ ವಿಧಿ ವಿಜ್ಞಾನ ಪ್ರಯೋಗಾಲಯ (FSL) ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳಲು ಎಸ್‍ಐಟಿ ತಂಡ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಎಸ್‍ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆ ಮಾಚಿಕೊಂಡಿರುವ ವ್ಯಕ್ತಿಯ ಪತ್ತೆಗೆ ಅಂಗಾಂಗ ಪರೀಕ್ಷೆಗೆ ಎಸ್‍ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: `ಡಿ’ಬಾಸ್ ಬಗ್ಗೆ ಮಾತಾಡಿದ್ರೆ ಜೀವಂತ ಸುಡೋದಾಗಿ ಬೆದರಿಕೆ – ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ವಶಕ್ಕೆ

ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ವ್ಯದ್ಯಕೀಯ ಪರೀಕ್ಷೆ ನಡೆದಿತ್ತು. ಇದೀಗ ದಾಖಲಾಗಿದ್ದ, 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‍ಗೆ ವೈದ್ಯಕೀಯ ಪರೀಕ್ಷೆ ನಡೆದಿದೆ. ಪ್ರಜ್ವಲ್‍ಗೆ ವ್ಯದ್ಯಕೀಯ ಪರೀಕ್ಷೆ ಹಿನ್ನೆಲೆ ಬೌರಿಂಗ್ ಆಸ್ಪತ್ರೆ ಸುತ್ತ ಪೊಲೀಸ್ ಭದ್ರತೆ ನೀಡಲಾಗಿತ್ತು.

ನಾಲ್ಕು ಜನ ವೈದ್ಯರ ತಂಡ ಐದು ಗಂಟೆಗಳ ಕಾಲ ಪ್ರಜ್ವಲ್‍ಗೆ ವೈದ್ಯಕೀಯ ಪರಿಕ್ಷೆಯನ್ನು ನಡೆಸಿದ್ದಾರೆ. ಈ ವೇಳೆ ಎಫ್‍ಎಸ್‍ಎಲ್ ಅಧಿಕಾರಿಗಳ ತಂಡವು ಭಾಗಿಯಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತಹ ಎಲ್ಲಾ ಟೆಸ್ಟ್‌ಗಳನ್ನು ವೈದ್ಯರ ತಂಡ ನಡೆಸಿದೆ. ಈ ಬಗ್ಗೆ ಎಸ್‍ಐಟಿ ತಂಡಕ್ಕೆ ವೈದ್ಯಕೀಯ ವರದಿಯನ್ನು ವೈದ್ಯರ ತಂಡ ನೀಡಲಿದೆ.

ಬಂಧನಕ್ಕೊಳಗಾಗಿರುವ ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜೊತೆ ಇದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಅವರು ಜರ್ಮನಿಗೆ ತೆರಳಿ ತಲೆ ಮರೆಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೇ ಜರ್ಮನಿಯಲ್ಲಿದ್ದರು. ಬಳಿಕ ಭಾರತಕ್ಕೆ ಮರಳುತ್ತಿದ್ದಂತೆ ಎಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿ ಬಿದ್ದ ಟೆಂಪೋ – 8 ಮಂದಿ ದುರ್ಮರಣ

Share This Article