‘ಮ್ಯಾಕ್ಸ್’ ಸಿನಿಮಾ ರಿಲೀಸ್ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸುದೀಪ್

Public TV
1 Min Read

ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಹೀಗಿರುವಾಗ ‘ಮ್ಯಾಕ್ಸ್’ (Max Film) ಚಿತ್ರ ರಿಲೀಸ್ ಆಗೋದು ಯಾವಾಗ ಎಂದು ಫ್ಯಾನ್ಸ್‌ಗೆ ಸುದೀಪ್ ಅಪ್‌ಡೇಟ್ ಕೊಟ್ಟಿದ್ದಾರೆ. ಇದನ್ನೂ ಓದಿ:ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಟೆಂಪಲ್‌ ರನ್‌ – ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಕೆ

2022ರಲ್ಲಿ ತೆರೆಕಂಡ ‘ವಿಕ್ರಾಂತ್ ರೋಣ’ (Vikrant Rona) ಚಿತ್ರದ ನಂತರ ಸುದೀಪ್ ಗ್ಯಾಪ್ ತೆಗೆದುಕೊಂಡರು. ಬಿಗ್ ಬಾಸ್ ಶೋ ಸೇರಿದಂತೆ ಇತರೆ ಕೆಲಸಗಳಲ್ಲಿ ಬ್ಯುಸಿಯಾದರು. ಈಗ ‘ಮ್ಯಾಕ್ಸ್’ ಕಥೆ ಹೇಳೋಕೆ ಸುದೀಪ್ ರೆಡಿಯಾಗಿದ್ದಾರೆ. ಇದೇ ಆಗಸ್ಟ್‌ಗೆ ಸಿನಿಮಾ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸುದೀಪ್, ‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಪೂರ್ಣಗೊಂಡಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಪ್ಲ್ಯಾನ್‌ ಮಾಡಿದ್ದೇವೆ ಎಂದು ಸುದೀಪ್ ತಿಳಿಸಿದರು. ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಸಿನಿಮಾ ರಿಲೀಸ್ ಆಗೋದು ಪಕ್ಕಾ. ಈ ಸುದ್ದಿ ಕೇಳಿ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಅಂದಹಾಗೆ, ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ (Vijay Karthikeya) ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

Share This Article