ವರ್ಷಗಳ ಬಳಿಕ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿಎಸ್‌ವೈ ಭೇಟಿ

Public TV
1 Min Read

ಮಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಭೇಟಿ ನೀಡಿದರು.

ದೇಗುಲದಲ್ಲಿ ಶ್ರೀಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ವೀರೇಂದ್ರ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು.

ದೇವರ ದರ್ಶನ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಹಳ ವರ್ಷಗಳ ನಂತರ ಮಂಜುನಾಥಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲ ಇದೆ. ಸಕಾಲದಲ್ಲಿ ಮಳೆ ಬೆಳೆ ಆಗಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಬರುವ ದಿನಗಳು ಒಳ್ಳೆ ದಿನಗಳಾಗಿರುತ್ತೆ ಅಂತಾ ನಾನು ಭಾವಿಸುತ್ತೇನೆ ಎಂದು ಹೇಳಿದರು.

Share This Article