‘ರಾಬರ್ಟ್’ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

Public TV
1 Min Read

ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಮತ್ತೊಂದು ಜೋಡಿ ಹಸೆಮಣೆ ಏರೋದಕ್ಕೆ ಸಜ್ಜಾಗಿದೆ. ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್ (Tharun Sudhir) ಜೊತೆ ಸೋನಲ್ (Sonal) ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕುಟುಂಬಕ್ಕೆ ಧನ ಸಹಾಯ ಮಾಡಿದ ಧ್ರುವ ಸರ್ಜಾ ಫ್ಯಾನ್ಸ್

ಖಳನಟ ಸುಧೀರ್ ಪುತ್ರ ತರುಣ್ ಸುಧೀರ್ ಚಿತ್ರರಂಗದ ಸಕ್ಸಸ್‌ಫುಲ್ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಬಿಟ್ಟು ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ಸೋನಲ್‌ ಜೊತೆಗಿನ ತರುಣ್‌ ಮದುವೆ ಮ್ಯಾಟರ್. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡುವಾಗ ಸೋನಲ್ ಮತ್ತು ತರುಣ್ ಪರಿಚಯವಾಗಿದೆ. ಈ ಪರಿಚಯವೇ ಈಗ ಮದುವೆ ಮಾತುಕತೆಗೆ ಮುನ್ನುಡಿ ಬರೆದಿದೆ. ಈ ಮದುವೆ (Wedding) ಬಗ್ಗೆ ಬಲ್ಲ ಮೂಲಗಳಿಂದ ವಲಯದಿಂದ ತಿಳಿದು ಬಂದಿದೆ.

ಎರಡು ಕುಟುಂಬದ ಸಮ್ಮತಿಯ ಮೇರೆಗೆ ಈಗ ತರುಣ್ ಮತ್ತು ಸೋನಲ್ ಮದುವೆಗೆ ರೆಡಿಯಾಗಿದ್ದಾರೆ. ಆಗಸ್ಟ್‌ಗೆ ಮದುವೆ ಡೇಟ್ ಕೂಡ ಫಿಕ್ಸ್ ಆಗಿತ್ತು. ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ಕೊಟ್ಟು ಶೀಘ್ರದಲ್ಲಿ ಮದುವೆ ಬಗ್ಗೆ ಅಧಿಕೃತ ಘೋಷಣೆ ಮಾಡ್ತಾರಾ? ಕಾದುನೋಡಬೇಕಿದೆ.

ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ.

Share This Article