NEET-UG ಕೌನ್ಸೆಲಿಂಗ್ ಮುಂದೂಡಿಕೆ

Public TV
1 Min Read

ನವದೆಹಲಿ: NEET UG ಕೌನ್ಸೆಲಿಂಗ್ ಆರಂಭಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಒಂದು ಹೊರಬಿದ್ದಿದೆ. ಇಂದಿನಿಂದ ಪ್ರಾರಂಭವಾಗಬೇಕಿದ್ದ ನೀಟ್-ಯುಜಿ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ.

ತೀವ್ರ ಒತ್ತಡ ವ್ಯಕ್ತವಾದ ಬೆನ್ನಲ್ಲೇ ಕೌನ್ಸಿಲಿಂಗ್ ಮುಂದೂಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಆದರೆ ಕೌನ್ಸೆಲಿಂಗ್‌ನ ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ.

ಸುಪ್ರೀಂಕೋರ್ಟ್‌ನಲ್ಲಿ (Supreme Court) ವಿಚಾರಣೆ ವೇಳೆ ನೀಟ್ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಉಲ್ಲೇಖಿಸಿತ್ತು. ಸದ್ಯ ಜುಲೈ 8ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಯ ಮೇಲೂ ಸಂಬಂಧಪಟ್ಟ ಇಲಾಖೆಗಳು ಮತ್ತು ಸಚಿವಾಲಯಗಳು ಕಣ್ಣಿಟ್ಟಿವೆ.  ಇದನ್ನೂ ಓದಿ: ಕಾಲ್ತುಳಿತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಬಾರದು: ಬೋಲೇನಾಥ ಬಾಬಾ

ಇಂದು ಆರಂಭವಾಗಬೇಕಿದ್ದ NEET-UG ಕೌನ್ಸೆಲಿಂಗ್ ಅನ್ನು ವಿಳಂಬಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಈ ಬೆಳವಣಿಗೆ ನಡೆದಿದೆ. ಜುಲೈ 8 ರಂದು NEET-UG 2024 ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಈ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರೊಂದಿಗೆ ಸಿಜೆಐ ಡಿವೈ ಚಂದ್ರಚೂಡ್ ಅವರ ಪೀಠವು ವಿಚಾರಣೆ ನಡೆಸಲಿದೆ.

Share This Article