ಜು.23 ರಂದು ʼಮೋದಿ 3.0ʼ ಬಜೆಟ್‌ ಮಂಡನೆ

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) 3.0 ಸರ್ಕಾರದ ಬಜೆಟ್‌ (Union Budget 2024) ಅನ್ನು ಇದೇ ಜು.23 ರಂದು ಮಂಡಿಸಲಾಗುವುದು.

ಮೋದಿ ಸಂಪುಟದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮೋದಿ 3.0 ಬಜೆಟ್‌ ಮಂಡಿಸಲಿದ್ದಾರೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮಂಡಿಸಲಾಗುತ್ತಿರುವ ಮೊದಲ ಬಜೆಟ್‌ ಇದಾಗಿದೆ. ಇದನ್ನೂ ಓದಿ: ಕೀರ್ತಿ ಚಕ್ರ; ಪತಿಯ ಮರಣೋತ್ತರ ಪ್ರಶಸ್ತಿ ಸ್ವೀಕರಿಸುವಾಗ ಕ್ಯಾ.ಅನ್ಶುಮನ್‌ ಸಿಂಗ್‌ ಪತ್ನಿ ಭಾವುಕ

ಬಜೆಟ್ ಅಧಿವೇಶನ ಜುಲೈ 22 ರಂದು ಆರಂಭವಾಗಲಿದ್ದು, ಆಗಸ್ಟ್ 12 ರವರೆಗೆ ನಡೆಯಲಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು, ಜುಲೈ 22 ರಿಂದ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಕೇಂದ್ರ ಬಜೆಟ್ 2024-25 ಅನ್ನು ಲೋಕಸಭೆಯಲ್ಲಿ 23 ಜುಲೈ ರಂದು ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕರು-ಭದ್ರತಾಪಡೆಗಳ ನಡುವೆ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ

Share This Article