ಆದಾಯಕ್ಕಿಂತ ಹೆಚ್ಚು ಆಸ್ತಿ – ನಿವೃತ್ತ ಎಂಜಿನಿಯರ್‌ ಸೇರಿದಂತೆ 13 ಅಧಿಕಾರಿಗಳಿಗೆ ಲೋಕಾ ಶಾಕ್‌

Public TV
1 Min Read

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್‌ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು (Lokayukta Police) ದಾಳಿ ನಡೆಸಿದ್ದಾರೆ.

ಬೆಂಗಳೂರು, ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ , ಬೆಳಗಾವಿ,ಕೋಲಾರ, ಮೈಸೂರು ,ಬೆಂಗಳೂರು, ಹಾಸನ ಜಿಲ್ಲೆಯಲ್ಲಿ ಲೋಕಾ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ – ಬಳ್ಳಾರಿಯಲ್ಲಿ ನಾಗೇಂದ್ರ ಆಪ್ತರಿಗೆ ಡ್ರಿಲ್‌, 2 ಬ್ಯಾಗ್‌ ದಾಖಲೆಯೊಂದಿಗೆ ತೆರಳಿದ ಅಧಿಕಾರಿಗಳು

ಒಟ್ಟು 11 ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಒಟ್ಟು 56 ಸ್ಥಳಗಳಲ್ಲಿ 100 ಕ್ಕೂ ಅಧಿಕಾರಿಗಳ ತಂಡದ ದಾಳಿ ನಡೆಸಿ ಕಡತ ಪರಿಶೀಲಿಸುತ್ತಿದೆ.

ಬೆಂಗಳೂರಿನ 15 ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಪಾಲಿಕೆ ಎಂಜಿನಿಯರ್ ಬಸವರಾಜ್ ಮಾಗಿ ಮನೆ ಹಾಗೂ ಸಂಬಂಧಿಕರ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.

ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ (Disappropriate Assets) ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್‌ ಎಫ್‌ಐಆರ್‌ ದಾಖಲಿಸಿದ್ದಾರೆ. ನ್ಯಾಯಾಲಯದಿಂದ ಶೋಧನಾ ವಾರಂಟ್‌ ಪಡೆದು ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.

Share This Article