ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

Public TV
2 Min Read

– ಸಿಎಂ ಯಾರಿಗೂ ಅನುದಾನ ನೀಡಿಲ್ಲ – ರಾಯರೆಡ್ಡಿ ಬಾಂಬ್‌

ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ (Guarantee Scheme) 60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ ಅನುದಾನ ಇಲ್ಲ.‌ ಯಾವಾಗಲೂ ಸಿಎಂ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಗೊತ್ತಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basvaraj Rayareddi) ಹೇಳಿದ್ದಾರೆ.

ಕೊಪ್ಪಳದ‌ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಕೆರೆ ನಿರ್ಮಾಣಕ್ಕೆ ಭೂಮಿ ಪಡೆಯಲು ಆಯೋಜಿಸಿದ್ದ ರೈತರು ಮತ್ತು ಗ್ರಾಮಸ್ಥರ ಸಭೆಯಲ್ಲಿಂದು ಅವರು ಮಾತನಾಡಿದರು. ಇದನ್ನೂ ಓದಿ: ಆರ್ಕಿಟೆಕ್ಚರ್ ಕೋರ್ಸ್ ಅರ್ಹತಾ ಅಂಕ ಶೇ.45ಕ್ಕೆ ಇಳಿಕೆ – ಅರ್ಜಿ ಸಲ್ಲಿಸಲು ಜು.13 ರವರೆಗೆ ಅವಕಾಶ: ಕೆಇಎ

ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.‌ ತುಂಬಾ ಕ್ಷೇತ್ರದ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಸಿಎಂ (Chief Minister) ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: 2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

ನಮ್ಮ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತುಂಬಾ ಕಷ್ಟ ಆಗುತ್ತಿದೆ. ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ಮಾಡಿಕೊಂಡಿದ್ದಾರೆ. ದಿನನಿತ್ಯ ಅವರ ಜೊತೆಯಲ್ಲೇ ಇರುವುದರಿಂದ ನನ್ನ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ರಾಜ್ಯದಲ್ಲಿ ಇದು ಒಂದೇ ಕೆಲಸ ಆಗುತ್ತಿದೆ. ಹಣಕಾಸಿನ ಆಂತರಿಕ ವಿಚಾರ, ನನಗೆ ಮಾತ್ರ ಗೊತ್ತಿದೆ.‌ ಇದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌! 

Share This Article