ಕಾಂಗ್ರೆಸ್‌ ಪ್ರಣಾಳಿಕೆ, ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್‌: ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಲೇವಡಿ

Public TV
2 Min Read

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್‌ (Union Budget 2024) ಕುರಿತು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದಾರೆ. ಇದು ಕಾಂಗ್ರೆಸ್‌ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್‌ಗಳ ಕಾಪಿ ಪೇಸ್ಟ್‌ ಎಂದು ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್‌ ಗಾಂಧಿ (Rahul Gandhi), ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್‌. ಮಿತ್ರಪಕ್ಷಗಳನ್ನು ಸಮಾಧಾನಪಡಿಸಿ, ಇತರೆ ರಾಜ್ಯಗಳಿಗೆ ಪೊಳ್ಳು ಭರವಸೆ ನೀಡಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: Union Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ, ಹೋಗಿದ್ದು ಎಲ್ಲಿಗೆ?

ಹಿಂಬಾಲಕರನ್ನು ಸಮಾಧಾನಪಡಿಸಲಾಗಿದೆ. ‘ಎಎ’ಗಳಿಗೆ ಮಾತ್ರ ಪ್ರಯೋಜನವಾಗಿದೆ. ಆದರೆ ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆ ಮತ್ತು ಹಿಂದಿನ ಬಜೆಟ್‌ಗಳನ್ನು ಕಾಪಿ ಪೇಸ್ಟ್‌ ಮಾಡಿದ ಬಜೆಟ್‌ ಇದು ಎಂದು ಲೇವಡಿ ಮಾಡಿದ್ದಾರೆ.

ಚುನಾವಣಾ ಫಲಿತಾಂಶಗಳ ನಂತರ ಮಾನ್ಯ ಹಣಕಾಸು ಸಚಿವರು, ಲೋಕಸಭೆ ಚುನಾವಣೆ ಸಂದರ್ಭದ ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿದ್ದಾರೆ ಎಂಬುದನ್ನು ತಿಳಿದು ನನಗೆ ಖುಷಿಯಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯ ಪುಟ 30 ರಲ್ಲಿ ವಿವರಿಸಿರುವ ಉದ್ಯೋಗ-ಸಂಯೋಜಿತ ಪ್ರೋತ್ಸಾಹವನ್ನು (ELI) ಅವರು ವಾಸ್ತವಿಕವಾಗಿ ಅಳವಡಿಸಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆಯ 11 ನೇ ಪುಟದಲ್ಲಿ ಪ್ರತಿ ಅಪ್ರೆಂಟಿಸ್‌ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬಜೆಟ್ 2024 – ಯಾವೆಲ್ಲ ವಸ್ತುಗಳ ಬೆಲೆ ಏರಿಕೆ? ಯಾವುದರ ಬೆಲೆ ಇಳಿಕೆ?

ಉದ್ಯೋಗ ಯೋಜನೆಯ ಖಾತರಿಗಿಂತ ಹೆಚ್ಚಿನ ಮುಖ್ಯಾಂಶಗಳನ್ನಷ್ಟೇ ಪಡೆದುಕೊಂಡು ಬಜೆಟ್‌ ವಿನ್ಯಾಸಗೊಳಿಸಲಾಗಿದೆ ಎಂದು ಬಜೆಟ್‌ ವಿರುದ್ಧ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹರಿಹಾಯ್ದಿದ್ದಾರೆ.

Share This Article