ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್

Public TV
1 Min Read

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಇದರ ನಡುವೆ ಧ್ರುವ ಅಭಿಮಾನಿಗಳು ಖುಷಿಪಡುವ ಸುದ್ದಿಯೊಂದು ಸಿಕ್ಕಿದೆ. ಬಹುನಿರೀಕ್ಷಿತ ‘ಕೆಡಿ’ (KD Film) ಸಿನಿಮಾದ ಬಗ್ಗೆ ಜು.29ರಂದು ಅಪ್‌ಡೇಟ್ ಹೊರಬೀಳಲಿದೆ. ಇದನ್ನೂ ಓದಿ:ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿಸಿದ ಪತ್ನಿ ವಿಜಯಲಕ್ಷ್ಮಿ

ಕೆವಿಎನ್ ಸಂಸ್ಥೆ ನಿರ್ಮಾಣದ, ಜೋಗಿ ಪ್ರೇಮ್ ನಿರ್ದೇಶನ ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ ರೆಟ್ರೋ ಸ್ಟೈಲಿನಲ್ಲಿ ಮಿಂಚಿದ್ದಾರೆ. ವಿಭಿನ್ನ ಪಾತ್ರಕ್ಕೆ ಜೀವತುಂಬಿದ್ದಾರೆ. ಕೆಡಿ ಸಿನಿಮಾ ಬಗ್ಗೆ ಮಾಹಿತಿ ನೀಡೋದಾಗಿ ಚಿತ್ರತಂಡ ಅನೌನ್ಸ್ ಮಾಡಿದೆ. ಇದೇ ಜು.29ರಂದು ಬೆಳಗ್ಗೆ 10:05ಕ್ಕೆ ಚಿತ್ರದ ಬಗ್ಗೆ ಮೇಜರ್ ಅಪ್‌ಡೇಟ್ ಸಿಗಲಿದೆ. ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

‘ಕೆಡಿ’ ಸಿನಿಮಾ ಮಲ್ಟಿ ಸ್ಟಾರ್‌ಗಳು ನಟಿಸಿರುವ ಸಿನಿಮಾ ಇದಾಗಿದೆ. ಅವರ ಪಾತ್ರದ ಬಗ್ಗೆ ಮೇಜರ್‌ ಅಪ್‌ಡೇಟ್‌ ಅಥವಾ ಟ್ರೈಲರ್‌ ರಿಲೀಸ್‌ ಆಗಲಿದೆಯಾ ಎಂದು ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಮಾನಿಗಳ ಚರ್ಚೆ ಶುರುವಾಗಿದೆ. ಈ ಎಲ್ಲದಕ್ಕೂ ಉತ್ತರ ಜು.29ರಂದು ಸಿಗಲಿದೆ. ಅಲ್ಲಿಯವರೆಗೂ ಕಾದುನೋಡಬೇಕಿದೆ.

ಅಂದಹಾಗೆ, ಧ್ರುವಗೆ ನಾಯಕಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ (Reeshma Nanaiah) ನಟಿಸಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty), ರವಿಚಂದ್ರನ್, ಸಂಜಯ್ ದತ್, ರಮೇಶ್ ಅರವಿಂದ್ ಸೇರಿದಂತೆ ಹಲವರು ನಟಿಸಿದ್ದಾರೆ. ಕೆಡಿ ಸಿನಿಮಾ ಡಿಸೆಂಬರ್‌ನಲ್ಲಿ ರಿಲೀಸ್ ಆಗಲಿದೆ.

Share This Article