ಶಿರಾಡಿಯಲ್ಲಿ ಮತ್ತೆ ಭೂಕುಸಿತ – ರಸ್ತೆಯಲ್ಲಿ ಸಾಲುಗಟ್ಟಿ ನಿಂತ ನೂರಾರು ವಾಹನಗಳು

Public TV
0 Min Read

ಹಾಸನ: ಹಾಸನ (Hassan) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಶಿರಾಡಿಘಾಟ್ (Shiradi Ghatt) ರಸ್ತೆ 25ರಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.

ಹಾಸನದ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರದಿಂದ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪು ಬಳಿ ಭೂಕುಸಿತವಾಗಿದೆ. ಇದರಿಂದ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಣ್ಣು ತೆರವುಗೊಳಿಸುತ್ತಿರುವ ಗುತ್ತಿಗೆದಾರರಿಗೆ ಪ್ರಯಾಣಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೇಸಿಗೆ ವೇಳೆಯಲ್ಲಿ ಕೆಲಸ ಮಾಡುವುದು ಬಿಟ್ಟು ಈಗ ಕೆಲಸ ಶುರು ಮಾಡಿದ್ದಾರೆ. ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article