ಕರ್ನಾಟಕಕ್ಕೆ ಸದ್ಯಕ್ಕಿಲ್ಲ ಮಳೆಯಿಂದ ಬಿಡುವು – ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ (Rain) ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.

ಈ ಮೊದಲು ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇದೀಗ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಿಗೆ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇಂದು ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕೇರಳ (Kerala) ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಕೇಸ್‌ | ವಿಡಿಯೋಗಳು ಅಸಲಿ – ಎಫ್‌ಎಸ್‌ಎಲ್‌ ವರದಿಯಲ್ಲಿ ಏನಿದೆ?

ಉಳಿದಂತೆ ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್ನಿಂದ ಯೆಲ್ಲೋ ಅಲರ್ಟ್ಗೆ ಮರಳಿದೆ. ಇಂದಿನಿಂದ ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಐವರು ಸಾವು, 50 ಮಂದಿ ಕಣ್ಮರೆ

Share This Article