ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Public TV
1 Min Read

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ (Paris Olympics) ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಎಕ್ಸ್‌ನಲ್ಲಿ ಭಾವುಕ ಸಾಲು ಬರೆದು ನಿವೃತ್ತಿ ಘೋಷಿಸಿದರು. ಅಮ್ಮಾ, ನನ್ನ ವಿರುದ್ಧ ಕುಸ್ತಿ (Wrestling) ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ.

 

ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ದೇಶದ ಜನತೆಯಲ್ಲಿ ಕೇಳಿಕೊಂಡಿದ್ದಾರೆ.

50 ಕೆಜಿ ಫ್ರಿಸ್ಟೈಲ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್ ಫೋಗಟ್ ಈ ಬಾರಿ ಬಂಗಾರ ಗೆಲ್ಲಬಹುದು ಎಂದು ನಿರೀಕ್ಷೆ ಭಾರತೀಯರಿಗಿತ್ತು. ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ.

Share This Article