ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ – ಆ.28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Public TV
1 Min Read

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ನ್ಯಾಯಾಧೀಶ ವಿಶ್ವನಾಥ್‌ ಸಿ ಗೌಡರ್‌ ಅವರು ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.

ಕೊಲೆ ಆರೋಪಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟ ಎದುರಾಗುತ್ತಿದೆ. ಬಿಯರ್‌ ಬಾಟಲ್‌, ಪವಿತ್ರಾ ಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಇದರಿಂದ ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.

Share This Article