ಸ್ವಲ್ಪವಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಡಿ: ಸಿಎಂಗೆ ಡಾ.ಅಶ್ವತ್ಥ್ ನಾರಾಯಣ್ ಸವಾಲ್

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಸ್ವಲ್ಪವಾದರೂ ಆತ್ಮಸಾಕ್ಷಿ, ನೈತಿಕತೆ, ಮೌಲ್ಯ, ಸಂವಿಧಾನಕ್ಕೆ ನಿಷ್ಠೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ (C.N. Ashwath Naraya) ಅವರು ಆಗ್ರಹಿದ್ದಾರೆ.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ವಾಲ್ಮೀಕಿ ನಿಗಮ, ಮುಡಾ ಹಗರಣ (MUDA Scam) ಸೇರಿ ಎರಡು ಹಗರಣಗಳಲ್ಲಿ ಅಧಿಕಾರ ದುರ್ಬಳಕೆ ಆಗಿರುವುದು ಸ್ಪಷ್ಟವಾಗಿ ಗೋಚರಿಸಿದೆ. ನಾಡಿನ ಕೊನೆಯ ಮನುಷ್ಯರೂ ನಿಮ್ಮ ಕಡೆ ಬೆರಳು ತೋರಿಸುವಂತಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಗಳು ತಪ್ಪು ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಭ್ರಷ್ಟ ಮುಖ್ಯಮಂತ್ರಿಯಾಗಿ ನೀವು ನಾಡಿನ ಜನತೆಗೆ ನ್ಯಾಯ ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಇದರಲ್ಲಿ ವೈಯಕ್ತಿಕ ದ್ವೇಷ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಡಿನ ಹಿತ, ಜನರ ಹಿತಕ್ಕಾಗಿ ಜನಪರ, ಭ್ರಷ್ಟಾಚಾರ ರಹಿತ ಆಡಳಿತ ಕೊಡಬೇಕಿತ್ತು. ಆದ್ದರಿಂದ ಭ್ರಷ್ಟ ಮುಖ್ಯಮಂತ್ರಿ ಯಾವುದೇ ಕಾರಣಕ್ಕೂ ಅಧಿಕಾರದಲ್ಲಿ ಮುಂದುವರಿಯಬಾರದು. ಮೇಲ್ನೋಟಕ್ಕೇ ಆರೋಪ ಇರುವ ಕಾರಣ, ತಜ್ಞರ ಸಲಹೆ ಪಡೆದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಆದರೂ, ಅಧಿಕಾರದಲ್ಲಿ ಮುಂದುವರೆಯಲು ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

Share This Article