MUDA Scam | ವೈಟ್ನರ್‌ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ

By
3 Min Read

– ಬಿಜೆಪಿ–ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರಿಂದು ಜನರೆದುರು ಬೆತ್ತಲಾಗಿದ್ದಾರೆ: ಸಿಎಂ

ಬೆಂಗಳೂರು: ವೈಟ್ನರ್ (Whitener) ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ವೈಟ್ನರ್ ಹಾಕಿರುವ ಸಾಲಿಗೆ ಲೈಟ್ ಬಿಟ್ಟು ವಿಡಿಯೋ ಮಾಡಲಾಗಿದ್ದು, ಅದರಲ್ಲಿನ ಸಾಲುಗಳು ಏನಿತ್ತು ಎಂಬುದನ್ನ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಟಕ್ಕರ್ ಕೊಟ್ಟಿದ್ದಾರೆ.

ಮುಡಾ ದಾಖಲಾತಿಯಲ್ಲಿ ವೈಟ್ನರ್‌ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ಬಿಜೆಪಿ-ಜೆಡಿಎಸ್‌ ನಾಯಕರ (BJP-JDS Leader) ಆರೋಪಗಳಿಗೆ ಸಿಎಂ ವೀಡಿಯೋ ಸಮೇತ ಸಾಕ್ಷಿ ನೀಡಿದ್ದಾರೆ. 33 ಸೆಕೆಂಡುಗಳ ವೀಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

ಸಿಎಂ ಎಕ್ಸ್‌ ಖಾತೆಯಲ್ಲಿ ಏನಿದೆ?
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ಇದನ್ನೂ ಓದಿ: Jammu Kashmir Election | ಘೋಷಿಸಿದ ಪಟ್ಟಿ ಹಿಂಪಡೆದು ಕೊನೆಗೂ 15 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ. ಇದನ್ನೂ ಓದಿ: ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಅಂತ ಬರೆದುಕೊಂಡಿದ್ದಾರೆ.

Share This Article