ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ

Public TV
1 Min Read

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ (Chikkanna) ಇಂದು (ಆ.29) ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ (Actor Darshan) ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆದರು ಎಂದು ಚಿಕ್ಕಣ್ಣ ಮಾತನಾಡಿದ್ದಾರೆ. ಇದನ್ನೂ ಓದಿ:ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ರಂಜನಿ ರಾಘವನ್

ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೋತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ನಿನ್ನೆ (ಆ.28) ನೋಟಿಸ್ ಕೊಟ್ಟಿದ್ದರು. 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೀನಿ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗಬಾರದು ಅನ್ನೋದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್‌ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್ ವ್ಯಾನ್‌ನಲ್ಲಿ ಬಳ್ಳಾರಿ ಜೈಲಿಗೆ ಕರೆ ತರಲಾಗಿದೆ.

Share This Article