ಉಜ್ಜಯಿನಿ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ ಹರಿಬಿಟ್ಟಿದ್ದ ಆಟೋ ಚಾಲಕ ಅರೆಸ್ಟ್

Public TV
1 Min Read

ಭೋಪಾಲ್: ಉಜ್ಜಯಿನಿಯ ಫುಟ್‍ಪಾತ್‍ನಲ್ಲಿ ಮಹಿಳೆಯೊಬ್ಬಳ ಮೇಲೆ ಹಗಲು ಹೊತ್ತಿನಲ್ಲೇ ನಡೆದ ಅತ್ಯಾಚಾರವನ್ನು ಚಿತ್ರೀಕರಿಸಿ ನಂತರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಆಟೋ ರಿಕ್ಷಾ ಚಾಲಕ ಮೊಹಮ್ಮದ್ ಸಲೀಂ ಎಂದು ಗುರುತಿಸಲಾಗಿದೆ. ವೀಡಿಯೊವನ್ನು ರೆಕಾರ್ಡ್ ಮಾಡಲು ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಟೋ ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‍ಎಸ್), ಐಟಿ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಚಿತ್ರ ಸೆರೆ, ಹಂಚಿಕೆ ಸಂಬಂಧ ಸೆಕ್ಷನ್ 72, 77, 294ರ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 5 ರಂದು ಮದ್ಯ ಸೇವಿಸಿದ್ದ ಆರೋಪಿ, ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದರು.

ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದ್ದಾರೆ. ಮಹಿಳೆ ಮದ್ಯದ ಅಮಲಿನಲ್ಲಿದ್ದಾಗ ಆರೋಪಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article