Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್​ ಮೇಲ್!

Public TV
2 Min Read

– ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆ ಅಧಿಕಾರಿಗಳು ಅಂತ ಹೇಳಿಕೊಂಡು ಮಹಿಳೆಯರಿಗೆ ವಿಡಿಯೋ ಕಾಲ್​ ಮಾಡಿ, ಅವರ ನಗ್ನ ದೇಹವನ್ನು ವಿಡಿಯೋ ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿದೆ. ಇದನ್ನು ಡಿಜಿಟಲ್‌ ಅರೆಸ್ಟ್‌ (Digital Arrest) ಎಂದೂ ಸಹ ಕರೆಯುತ್ತಾರೆ. ಈ ಕುರಿತು ಇಲ್ಲಿನ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (CEN) ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸೈಬರ್‌ ಕಳ್ಳರು ಹೊಸ ಮಾರ್ಗಗಳಲ್ಲಿ ಅಪರಾಧ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ. ಮೊದಲಿಗೆ ಇ-ಮೇಲ್‌, ಮೆಸೇಜ್, ಕಾಲ್ಸ್ ಅಥವಾ ವಾಟ್ಸಪ್‌ ಮೂಲಕ ಒಂದು ಮೆಸೇಜ್ ಬರುತ್ತದೆ. ಕ್ರೈಮ್‌ ಬ್ರ್ಯಾಂಚ್‌ನಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ಹೆಸರು ಕ್ರಿಮಿನಲ್ ಕೇಸ್‌ನಲ್ಲಿದೆ. ನೀವು ನಮ್ಮ ಹತ್ತಿರ ಬರಬೇಕು ರಿಪೋರ್ಟ್ ಕೊಡಬೇಕು ಯಾಕೆ ನೀವು ಈ ರೀತಿ ಮಾಡಿದೀರಿ ಅಂತ ಹೇಳ್ತಾರೆ. ಈ ರೀತಿ ಮಾಡಿ ಸಂತ್ರಸ್ತರಿಗೆ ಭಯ ಹುಟ್ಟಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

ಈಗ ನಾವು ನಿಮ್ಮನ್ನು ವಿಚಾರಣೆ ಮಾಡಬೇಕು. ಕ್ಯಾಮೆರಾ ಮುಂದೆ ನೀವು ಬರಬೇಕು. ಬೇರೆ ಕಡೆ ನೀವು ಹೋದರೆ ನಿಮ್ಮ ಕ್ರೈಮ್ ಬಗ್ಗೆ ಫ್ಯಾಮಿಲಿ ಅವರಿಗೆ ಹೇಳುತ್ತೇವೆ. ಹೇಗೆ ಕ್ರೈಮ್ ಮಾಡಿದೀರಿ ಅಂತಾ ನಿಮ್ಮ ಬಾಡಿ ವೆರಿಫಿಕೇಶನ್ ಆಗಬೇಕು ಬಟ್ಟೆ ಬಿಚ್ಚಬೇಕು ಅಂತಾ ಹೇಳ್ತಾರೆ. ಬಳಿಕ ಆ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ ನಂಬಿಸಿ ಹಣ ದೋಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಮೂರು ಪ್ರಕರಣಗಳು ಸೆನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

ಈ ರೀತಿ ದೂರವಾಣಿ ಕರೆಗಳು ಬಂದು ಬ್ಲ್ಯಾಕ್ ಮೇಲ್ ಮಾಡಿದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು ಎಂದು ಕರೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

Share This Article