ಬಾಲಿವುಡ್ ನಟಿ ಮಲೈಕಾ ಅರೋರಾ (Malaika Arora) ತಂದೆ ಅನಿಲ್ ಅರೋರಾ (Anil Arora) ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್ನಿಂದ ಹಾರಿ ಆತ್ಯಹತ್ಯೆ (Suicide) ಮಾಡಿಕೊಂಡಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಿರಣ್ ರಾಜ್ ಸ್ಥಿತಿ ಈಗ ಹೇಗಿದೆ?- ಅವಘಡದ ಬಗ್ಗೆ ವಿವರಿಸಿದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್

ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅನಿಲ್ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
