ಜಮ್ಮು & ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ – ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರರು

Public TV
1 Min Read

ಶ್ರೀನಗರ: ಸೇನೆಯ ವಿಶೇಷ ಪಡೆಗಳು, ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದರು. ಇದನ್ನೂ ಓದಿ: ರಾಹುಲ್‌ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಗಾಯಗೊಂಡಿದ್ದಾರೆ.

ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್‌ಎಫ್‌ ತಿಳಿಸಿದೆ. ಈ ಗಡಿಯು ಸರಿಸುಮಾರು 3,323 ಕಿಮೀ ವ್ಯಾಪಿಸಿದೆ. ಉದ್ವಿಗ್ನತೆ ಮತ್ತು ಭದ್ರತಾ ಸವಾಲುಗಳನ್ನು ಹೊಂದಿರುವ ವಿವಿಧ ವಲಯಗಳನ್ನು ಈ ಗಡಿ ಭಾಗ ಹೊಂದಿದೆ. ಇದನ್ನೂ ಓದಿ: ತಮಿಳುನಾಡಿನ ಮೀನುಗಾರಿಕಾ ಬೋಟ್‍ಗೆ ಲಂಕಾ ನೌಕಾಪಡೆಯ ಹಡಗು ಡಿಕ್ಕಿ – ನಾಲ್ವರಿಗೆ ಗಾಯ

Share This Article