ಹಿಂದೂಗಳ 25 ಅಂಗಡಿ ಸುಟ್ಟದ್ದು ಚಿಕ್ಕ ಘಟನೆಯೇ – ಪರಮೇಶ್ವರ್‌ಗೆ ಶೋಭಾ ಪ್ರಶ್ನೆ

Public TV
1 Min Read

ಬೆಂಗಳೂರು: ಸಿಎಂ ಮೇಲೆ ಭ್ರಷ್ಟಾಚಾರದ ಆರೋಪ ಇದೆ. ಸಚಿವರ ಮೇಲೂ ಭ್ರಷ್ಟಾಚಾರದ ದೂರುಗಳಿವೆ. ಇಷ್ಟೊಂದು ಕೆಟ್ಟ ಸರ್ಕಾರ ಎಂದು ಜನರು ಮಾತನಾಡುವ ಸಂದರ್ಭದಲ್ಲಿ ಅದನ್ನು ಮುಚ್ಚಿ ಹಾಕಲು ನೀವೇನಾದರೂ ಗಲಭೆ ಮಾಡುತ್ತಿದ್ದೀರಾ? ನಾಗಮಂಗಲದ (Nagamangala) ಘಟನೆ ಕುರಿತು ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಮೂಲಕ ತನಿಖೆ ಮಾಡಿಸಿ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ (Shobha Karandlaje) ಅವರು ಆಗ್ರಹಿಸಿದರು.

ರಾಜಾಜಿನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎನ್‌ಐಎ ತನಿಖೆ ಮಾಡಿದರೆ ಮಾತ್ರ ಸತ್ಯಾಂಶ ಹೊರಕ್ಕೆ ಬರಲಿದೆ. ನಾಗಮಂಗಲದ ಘಟನೆಯಿಂದ ನಮ್ಮೆಲ್ಲ ಹಿಂದೂಗಳಿಗೆ ಅಪಮಾನ ಆಗಿದೆ. ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಚಪ್ಪಲಿ ಎಸೆದಿದ್ದಾರೆ. ಕಲ್ಲು ಎಸೆದಿದ್ದಾರೆ. ಅಲ್ಲದೆ ನಮ್ಮ ಅಂಗಡಿಗಳನ್ನು ಸುಟ್ಟಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್

ಗೃಹ ಸಚಿವರು ಇದೊಂದು ಚಿಕ್ಕ ಘಟನೆ ಎಂದಿದ್ದಾರೆ. ಹಿಂದೂಗಳ 25 ಅಂಗಡಿ ಸುಟ್ಟದ್ದು ನಿಮಗೆ ಚಿಕ್ಕ ಘಟನೆಯಾಗಿ ಕಂಡರೆ ಇನ್ನು ದೊಡ್ಡ ಘಟನೆ ಏನಾಗಬೇಕಾಗಿತ್ತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: Nagamangala Violence| 10 ಲಕ್ಷ ರೂ. ಮೊತ್ತದ ವಸ್ತುಗಳು ಸುಟ್ಟು ಹೋಗಿದೆ, 10 ವರ್ಷ ಕಳೆದ್ರೂ ನಷ್ಟ ಭರಿಸಲು ಸಾಧ್ಯವಿಲ್ಲ: ಗುಜರಿ ಅಂಗಡಿ ಮಾಲೀಕ

ಸಿದ್ದರಾಮಯ್ಯನವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳಿಗೆ ಅಪಮಾನ ಮಾಡುವಂತಹ ಕಾರ್ಯಗಳು ನಡೆಯುತ್ತಿದೆ. ತನ್ನ ತಪ್ಪನ್ನು ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ಇಂಥ ಕೆಲಸ ಮಾಡುತ್ತಿದೆಯೇ ಎಂಬ ಸಂಶಯ ಮೂಡುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನಾಗಮಂಗಲದ ಘಟನೆ ಕಿಡಿಗೇಡಿಗಳ ಕೆಲಸ, ಹೆಚ್‌ಡಿಕೆ ಕಡ್ಡಿ ಗೀರುವುದು ಬೇಡ: ಬಾಲಕೃಷ್ಣ

Share This Article