ನಾಗಮಂಗಲ ಗಲಭೆ ಕೇಸ್- ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ

Public TV
1 Min Read

ಬೆಂಗಳೂರು: ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಬಿಜೆಪಿಯಿಂದ ಸತ್ಯಶೋಧನ ಸಮಿತಿ ರಚನೆ ಮಾಡಲಾಗಿದೆ.

ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) 5 ಜನರು ತಂಡವನ್ನು ರಚನೆ ಮಾಡಿದ್ದು, ಒಂದು ವಾರದ ಒಳಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: Nagamangala Violence | ಹಿಂದೂಗಳ ಮೇಲೆ ಹಾಕಿರೋ ಕೇಸ್ ವಾಪಸ್ ಪಡೆಯದೇ ಹೋದ್ರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ- ತೇಜಸ್ವಿಸೂರ್ಯ

ಸಮಿತಿಯೂ ಒಂದು ವಾರದಲ್ಲಿ ಘಟನೆಗೆ ಕಾರಣ ಏನು ಎಂಬುದು ಸೇರಿದಂತೆ ಸಂಪೂರ್ಣ ಮಾಹಿತಿ ಕಲೆ ಹಾಕಿ ರಾಜ್ಯಾಧ್ಯಕ್ಷರಿಗೆ ನೀಡಲಿದೆ. ಸಮಿತಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ, ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದಾರೆ. ಇದನ್ನೂ ಓದಿ: ಸೆ.17 ರವರೆಗೆ ದರ್ಶನ್‌, ಮರ್ಡರ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

Share This Article