ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

Public TV
1 Min Read

– ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಥುವಾದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿತ್ತು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರೇ ಜುಲೈನಲ್ಲಿ ದೋಡಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲೂ ಭಾಗಿಯಾಗಿದ್ದರು. ಆಗ ಅಧಿಕಾರಿ ಸೇರಿದಂತೆ ನಾಲ್ವರು ಸೈನಿಕರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದರು.

Share This Article