ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಬರ್ಬರ ಹತ್ಯೆ, ಮಚ್ಚಿನೇಟಿಂದ ಪತ್ನಿ ಗಂಭೀರ

Public TV
1 Min Read

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು (Businessman) ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.

ಮಹಾರಾಷ್ಟ್ರದ (maharashtra) ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: Bengaluru | ಹೇಗೆ ನಡೆಯುತ್ತೆ ಭೀಕರ ಕೊಲೆಯ ಮರಣೋತ್ತರ ಪರೀಕ್ಷೆ?

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ (ಇಂದು) ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ಜನರ ಕನಸು ಶೀಘ್ರ ನನಸು – ಮುಂದಿನ ವಾರದಲ್ಲೇ ಮನೆಗಳಿಗೆ ಬರಲಿದೆ ಕಾವೇರಿ!

Share This Article