ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ

Public TV
2 Min Read

– ಚನ್ನಪಟ್ಟಣಕ್ಕೆ ನಿಖಿಲ್‌ ನಿಲ್ಲಿಸುವಂತೆ ಕಾರ್ಯಕರ್ತರು ಪಟ್ಟು

ರಾಮನರಗ: ನಾನು ಎಂದೂ ಯಾರಿಗೂ ದ್ರೋಹ ಮಾಡಿಲ್ಲ. ನನ್ನನ್ನ ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ. ನಿಮ್ಮ ಮನೆ ಮಗ ನಾನು, ನಿಮ್ಮ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಭಾವ ನಾತ್ಮಕ ಭಾಷಣ ಮಾಡಿದರು.

ಚನ್ನಪಟ್ಟಣ (Channapatna) ಚುನಾವಣಾ ಕಣ ರಂಗೇರಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.‌ ಸಂಜೆವರೆಗೂ ಐದು ಜಿಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಾಗುತ್ತಿದೆ. ‌ಅದರಂತೆ ಚನ್ನಪಟ್ಟಣದ ಕೋಡಂಬಳ್ಳಿ, ಇಗ್ಗಲೂರು ಗ್ರಾಮಗಳಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಹೆಚ್‌ಡಿಕೆ ಭಾವುಕ ಭಾಷಣ ಮಾಡಿದರು. ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

ನಾನು ಎಂದೂ ಯಾರಿಗೂ ದ್ರೋಹ ಮಾಡಿಲ್ಲ. ನನ್ನನ್ನ ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ. ಜಾತಿ, ಪಕ್ಷ ನೋಡದೇ ನಾನು ಕೆಲಸ ಮಾಡಿದ್ದೇನೆ. ನೀವು ಬೆಳಿಸಿದ ನಿಮ್ಮ ಮನೆ ಮಗ ನಾನು. ನೀವು ಬೆಳೆಸಿದ ನಿಮ್ಮ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ. ನಾನು ಒಳ್ಳೆಯ ಕೆಲಸ ಮಾಡಿದ್ರೆ, ಜನಪರ ಯೋಜನೆ ತಂದಿದ್ರೆ ಬೆಂಬಲ ನೀಡಿ. ಎನ್‌ಡಿಎ ಅಭ್ಯರ್ಥಿಯನ್ನ ಇಲ್ಲಿ ಹಾಕ್ತೇವೆ, ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಈ ವೇಳೆ ಅಭ್ಯರ್ಥಿ ಹೆಸರು ಘೋಷಣೆ ಮಾಡುವಂತೆ ಕಾರ್ಯಕರ್ತರ ಪಟ್ಟು ಹಿಡಿದರು. ನಿಖಿಲ್‌ ಅವರನ್ನೇ ನಿಲ್ಲಿಸುವಂತೆ ಜೆಡಿಎಸ್‌ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಈಗಾಗಲೇ ಈ ಬಗ್ಗೆ ಮೀಟಿಂಗ್ ಮಾಡಿದ್ದೀವಿ, ಇನ್ನೊಂದು ವಾರದಲ್ಲಿ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡ್ತೀವಿ ಎಂದು ಕಾರ್ಯಕರ್ತರನ್ನು ಸಮಾಧಾನಪಡಿದರು. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ಇವತ್ತು ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದಿದ್ದೇನೆ. ಜಿಪಂ ವ್ಯಾಪ್ತಿಯ 5 ಭಾಗದಲ್ಲಿ ಸಭೆ ಮಾಡ್ತಿದ್ದೇನೆ. 10ನೇ ತಾರೀಖು ಮತ್ತೆ ಚನ್ನಪಟ್ಟಣದಲ್ಲಿ ಸಭೆ ಮಾಡುತ್ತಿದ್ದೇನೆ. ಸಭೆ ಮಾಡ್ತಿರೋ ಉದ್ದೇಶವೇ ಜನಾಭಿಪ್ರಾಯ ಪಡೆಯಲು. ಇಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಲು ಏನೇನು ಅಭಿಪ್ರಾಯ ಸಿಗುತ್ತೆ ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

ಒಬ್ಬ 300 ಕೋಟಿ, ಮತ್ತೊಬ್ಬ 500ಕೋಟಿ ಅಂತಾನೆ:
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ಡಿಕೆಶಿ ಅನುದಾನ ತಂದಿದ್ದೇನೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಎಲ್ಲಿದೆ ಅನುದಾನ? ಎಲ್ಲಿ ತಂದವ್ರೆ, ಯಾವುದೋ ಬೋರ್ಡ್‌ಗಳಲ್ಲಿ ಮಾತ್ರವಾ? ನಮ್ಮ ಕಾಲದಲ್ಲಿ ಏನು ಆಗಿಲ್ಲ ಅಂತಾರಲ್ಲ. ಎಲ್ಲಾ ದಾಖಲೆಗಳನ್ನ ಬಿಡುಗಡೆ ಮಾಡ್ತೀನಿ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಚನ್ನಪಟ್ಟಣಕ್ಕೆ ಅನುದಾನ ತಂದಿರೋದು ನಾನು. ಮೂರು ತಿಂಗಳಲ್ಲಿ ಚನ್ನಪಟ್ಟಣಕ್ಕೆ ಇವರ ಕೊಡುಗೆ ಏನು.? ನಾನು ಸೇತುವೆಗಳ ನಿರ್ಮಾಣಕ್ಕೆ ಅನುಮತಿ ಕೊಡಿಸಿದ್ದೆ, ಅದಕ್ಕೆ ಚೆಕ್ ಡ್ಯಾಂ ಅಂತ ಪಕ್ಕದಲ್ಲಿ ಬೋರ್ಡ್ ಹಾಕೊಂಡು ಓಡಾಡ್ತಿದ್ದಾರೆ. ಮೂರು ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಿರಲ್ಲ. ಏನು ಮಾಡಿದ್ದೀರಿ ಪಟ್ಟಿ ಕೊಡಿ. ಒಬ್ಬ 300 ಕೋಟಿ ಇನ್ವೆಸ್ಟ್ ಮಾಡಿದ್ದೀವಿ ಅಂತಾನೆ, ಮತ್ತೊಬ್ಬ 500ಕೋಟಿ ಅಂತಾನೆ. ಎಲ್ಲಿದೆ ಹಣ? ಇವರ ಕೈಯಲ್ಲಿ ರಸ್ತೆ ಗುಂಡಿ ಮುಚ್ಚಲು ಆಗಿಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

Share This Article