ಎರಡು ದಿನದಿಂದ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಸೇತುವೆ

Public TV
1 Min Read

ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಹಂಚಿನ ಸಿದ್ದಾಪುರ ಗ್ರಾಮದ ಬಳಿಯಿರುವ ಸೇತುವೆ ಕುಸಿದು ಬಿದ್ದಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸೇತುವೆ ಕುಸಿದು ಬಿದ್ದಿದ್ದು, ಅನಾಹುತಗಳು ಬೆಳಕಿಗೆ ಬರುತ್ತಿವೆ.

ಹಂಚಿನ ಸಿದ್ದಾಪುರ ಗ್ರಾಮದ ಸಮೀಪ ಭದ್ರಾ ನಾಲೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯು ಧಾರಾಕಾರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಸಂಪರ್ಕ ಕಡಿತಗೊಂಡಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಹಂಚಿನ ಸಿದ್ದಾಪುರ ಗ್ರಾಮದಿಂದ ಸಿದ್ದೇಶ್ವರ ದೇವಸ್ಥಾನ ಹಾಗೂ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಹೋಗಿದೆ. ಸಾರ್ವಜನಿಕರು ಪರದಾಡುವ ಸ್ಥಿತಿ ಉಂಟಾಗಿದೆ. ಸೇತುವೆಯನ್ನು ಶೀಘ್ರವೇ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ವಿಜಯೇಂದ್ರ ಏನು ಪುರೋಹಿತನಾ, ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

Share This Article