ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

Public TV
1 Min Read

ಮಂಡ್ಯ: ಈಜಲೆಂದು (Swim) ಕೆರೆಗೆ ತೆರಳಿದ್ದ ಇಬ್ಬರು ಬಾಲಕರು ಈಜು ಬಾರದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕರಪುರ ಗ್ರಾಮದ ಸೋಮು (14) ಹಾಗೂ ಮುತ್ತುರಾಜು (17) ಮೃತ ಬಾಲಕರು. ಕೆರೆಯಲ್ಲಿ ಈಜು ಹೊಡೆಯಲೆಂದು ಐವರು ಸ್ನೇಹಿತರು ಕೆರೆಗೆ ತೆರಳಿದ್ದರು. ಈ ವೇಳೆ ಈಜು ಬಾರದೇ ಸೋಮು ಹಾಗೂ ಮುತ್ತುರಾಜು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿದ ಇಬ್ಬರ ಪೈಕಿ ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಂಡೂರು ಬಿಜೆಪಿಯಲ್ಲಿ ಬಂಡಾಯದ ಹೊಗೆ – ಸಂಧಾನಕ್ಕೂ ಬಗ್ಗದ ಟಿಕೆಟ್ ವಂಚಿತ ದಿವಾಕರ್

ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಭಾನುವಾರ ಸಂಜೆ ಘಟನೆ ನಡೆದಿದೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರೀ ಮಳೆ; ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ

Share This Article