ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

Public TV
1 Min Read

ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ಇಂದು (ಅ.27) ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಪತ್ನಿ ಜೊತೆ ಹಾಸನಾಂಬೆ ದೇವಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ತರುಣ್, ಆದಷ್ಟು ಬೇಗ ದರ್ಶನ್ (Darshan) ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಮಾತನಾಡಿದರು. ಇದನ್ನೂ ಓದಿ:ಶ್ರೀಲೀಲಾ ನಟಿಸಬೇಕಿದ್ದ ಪಾತ್ರಕ್ಕೆ ಪೂಜಾ ಹೆಗ್ಡೆ ಎಂಟ್ರಿ?

ಮದುವೆ ಬಳಿಕ ಮೊದಲ ಬಾರಿಗೆ ಪತ್ನಿ ಸೋನಾಲ್ (Sonal) ಜೊತೆ ತರುಣ್ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಸಂತಸಪಟ್ಟಿದ್ದಾರೆ. ಆ ನಂತರ ಮಾಧ್ಯಮಕ್ಕೆ ಮಾತನಾಡಿದ ತರುಣ್ ಸುಧೀರ್, ಆದಷ್ಟು ಬೇಗ ದರ್ಶನ್ ಅವರು ಬಿಡುಗಡೆ ಆಗಲಿ ಎಂದು ಹಾಸನಾಂಬೆ ದೇವಿ ಬಳಿ ಕೇಳಿಕೊಂಡಿದ್ದೇನೆ. ಅವರು ಇದ್ದಿದ್ದರೆ ಈ ಬಾರಿ ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇನೆ.

ನಾವು ಮದುವೆಯಾದ ನಂತರ ದೇವಿ ದರ್ಶನಕ್ಕೆ ಬಂದಿದ್ದೇವೆ ಅದು ನನಗೆ ವಿಶೇಷ. ಈ ತಾಯಿ ಹತ್ತಿರ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದೆನ್ನೆಲ್ಲಾ ಒಮ್ಮೆಲೆ ಹೇಳಿಕೊಳ್ಳಬೇಕು ಅನ್ನಿಸುತ್ತದೆ. ಇಲ್ಲಿ ಒಂದು ವೈಬ್ರೇಷನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ. ಕಳೆದ ವರ್ಷ ಶೂಟಿಂಗ್ ಇದ್ದಿದ್ದರಿಂದ ಬರಲು ಆಗಿರಲಿಲ್ಲ ಎಂದು ತರುಣ್ ಹೇಳಿದರು.

ಅಂದಹಾಗೆ, ಆಗಸ್ಟ್ 11ರಂದು ಸೋನಾಲ್ ಜೊತೆ ತರುಣ್ ಸುಧೀರ್ ಬೆಂಗಳೂರಿನಲ್ಲಿ ಮದುವೆಯಾದರು. ಆ ನಂತರ ಮಂಗಳೂರಿನಲ್ಲಿ ಕ್ರೈಸ್ತ ಧರ್ಮದ ಪದ್ಧತಿಯಂತೆ ಸೋನಾಲ್‌ ಜೊತೆ ಮದುವೆ ನಡೆಯಿತು.

Share This Article