ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಸಾವಿರಾರು ಮರಗಳ ಬಲಿ ಆರೋಪ; ತಪ್ಪಿತಸ್ಥರ ವಿರುದ್ಧ ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ

Public TV
1 Min Read

ಶ್ (Yash) ನಟನೆಯ ‘ಟಾಕ್ಸಿಕ್’ (Toxic) ಸಿನಿಮಾ ಸೆಟ್‌ಗಾಗಿ ಸಾವಿರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವರು, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ಸಿನಿಮಾದಲ್ಲಿ ಕನ್ನಡದ ನಟ ಕಿಶೋರ್?

‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನ ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟ್‌ಲೈಟ್ ಚಿತ್ರಗಳಿಂದ ಈ ಕೃತ್ಯ ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದಿದ್ದಾರೆ.

ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹಳೆಯ ಸ್ಯಾಟ್‌ಲೈಟ್ ಚಿತ್ರ ಹಾಗೂ ಈಗಿನ ಸ್ಯಾಟ್ ಲೈಟ್ ಚಿತ್ರವನ್ನ ಹಂಚಿಕೊಂಡಿದ್ದಾರೆ. ಅರಣ್ಯ ಭೂಮಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಅಂತಾ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Share This Article