ಬೆಂಗಳೂರು| ಇಸ್ಪೀಟ್‌ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಪೆಪ್ಪರ್‌ ಸ್ಪ್ರೇ

Public TV
1 Min Read

ಬೆಂಗಳೂರು: ಇಸ್ಪೀಟ್‌ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆಯೇ ಪೆಪ್ಪರ್‌ ಸ್ಪ್ರೇ ದಾಳಿ ಮಾಡಿರುವ ಘಟನೆ ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ನವಿಲುನಗರದ ಇಟ್ಟಿಗೆ ಗೂಡಿನಲ್ಲಿ ನಡೆದಿದೆ.

ರೌಡಿಶೀಟರ್ ಕ್ಯಾಟ್ ರಾಜನ ಸಹಚರರು ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ಆರೋಪ ಕೇಳಿಬಂದಿತ್ತು. ಮಾಹಿತಿ ಮೇರೆಗೆ ಇಂದು ಸಂಜೆ ಎಸಿಪಿ ಚಂದನ್ & ಟೀಂ ದಾಳಿ ನಡೆಸಿತು. ಸುಮಾರು 30 ಜನ ಲಕ್ಷ ಲಕ್ಷ ಹಣ ಬಾಜಿ ಕಟ್ಟಿ ಇಸ್ಪೀಟ್ ಆಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇಸ್ಪೀಟ್ ಅಡ್ಡೆ ಮೇಲಿನ ದಾಳಿ ವೇಳೆ ಪೊಲೀಸರ ಮೇಲೆ ಆರೋಪಿಗಳು ಪೆಪ್ಪರ್ ಸ್ಪ್ರೇ ಹೊಡೆದಿದ್ದಾರೆ. ಆ ಬಳಿಕ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಇನ್ನೂ ಕೆಲವರು ಸ್ಥಳದಲ್ಲಿ ಹಣದ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಇಸ್ಪೀಟ್ ಆಡುತ್ತಿದ್ದ 13 ಆರೋಪಿಗಳನ್ನು ಬಂಧಿಸಲಾಗಿದೆ.

3.80 ಲಕ್ಷ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article