ಕೆಟ್ಟು ನಿಂತ ಕಾರಿಗೆ ಲಾರಿ ಡಿಕ್ಕಿ – ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Public TV
1 Min Read

ಕಾರವಾರ: ಕೆಟ್ಟು ನಿಂತ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 15 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಈ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಅಂಕೋಲದ (Ankola) ರಾಷ್ಟ್ರೀಯ ಹೆದ್ದಾರಿ 67ರ ಬಾಳೆಗುಳಿ ಕ್ರಾಸ್ ಬಳಿ ನಡೆದಿದೆ.

ಕಾರಿಗೆ ಲಾರಿ ಡಿಕ್ಕಿ ಹೊಡೆದ ಬಳಿಕ ಚಾಲಕ ನಾಪತ್ತೆಯಾಗಿದ್ದಾನೆ. ಇದರ ಬೆನ್ನಲ್ಲೇ ಶೋಧ ನಡೆಸಿದಾಗ ಲಾರಿಯಲ್ಲಿ ಅಕ್ರಮವಾಗಿ 15 ಕ್ಕೂ ಹೆಚ್ಚು ಗೋವುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಜಾರ್ಖಂಡ್‌ನ ಹಲವೆಡೆ ಭೂಮಿ ಕಂಪನ – ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

ಅಂಕೋಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, 15 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಆದರೆ ಈ ಗೋವುಗಳನ್ನು ಎಲ್ಲಿಗೆ? ಯಾರು ತೆಗೆದುಕೊಂಡು ಹೋಗುತಿದ್ದರು? ಲಾರಿ ಮಾಲೀಕ ಯಾರು ಎಂಬ ಬಗ್ಗೆ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಗ್ರರನ್ನು ಕೊಲ್ಲುವ ಬದಲು ಬಂಧಿಸಿ: ಫಾರೂಖ್ ಅಬ್ದುಲ್ಲಾ ಆಗ್ರಹ

Share This Article