MUDA Scam| ವಿಚಾರಣೆಗೆ ಹಾಜರಾಗಿ – ಸಿಎಂಗೆ ಲೋಕಾಯುಕ್ತ ಪೊಲೀಸ್‌ ನೋಟಿಸ್‌

Public TV
1 Min Read

ಮೈಸೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಲೋಕಾಯುಕ್ತ ಪೊಲೀಸರು (Lokayukta Police) ನೋಟಿಸ್‌ ಜಾರಿ ಮಾಡಿದ್ದಾರೆ.

ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.  ಇದನ್ನೂ ಓದಿ: Gadaga| ಮಠದ 11 ಎಕ್ರೆಗೆ ಕನ್ನ – ಪ್ರಸಾದ ನಿಲಯ ಈಗ ‘ವಕ್ಫ್’ ಆಸ್ತಿ

 

ಸಿದ್ದರಾಮಯ್ಯನವರ 40 ವರ್ಷದ ಇತಿಹಾಸದಲ್ಲಿ ಇಲ್ಲಿಯವರೆಗೆ ತನ್ನ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಗಲಿ ಇತರ ವಿಚಾರಣಾ ಸಂಸ್ಥೆಯಿಂದ ನೋಟಿಸ್‌ ಸ್ವೀಕರಿಸಿರಲಿಲ್ಲ. ಆದರೆ ಈಗ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್‌ ಸ್ವೀಕರಿಸಿದ್ದಾರೆ.

Share This Article