Bengaluru| ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ

Public TV
1 Min Read

ಬೆಂಗಳೂರು: ವರ್ಷದ ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಇಗ್ಗಲೂರುನಲ್ಲಿ ನಡೆದಿದೆ.

ಮನು ಮತ್ತು ಹರ್ಷಿತಾ ದಂಪತಿಗೆ ಆರೂವರೆ ತಿಂಗಳಿಗೆ ಸಿಜೇರಿಯನ್ ಮೂಲಕ ಮಗು ಜನಿಸಿತ್ತು. ಮಗುವಿಗೆ ಉಸಿರಾಟದ ತೊಂದರೆಯಿಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಗು ಸಂಪೂರ್ಣ ಚೇತರಿಕೆ ಕಂಡ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಆದರೆ ತಾಯಿ ಶೌಚಾಲಯಕ್ಕೆ ಹೋದಾಗ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಸೋಮವಾರ ಮಧ್ಯಾಹ್ನ 12:45ರ ಸುಮಾರಿಗೆ ಮಗು ನಾಪತ್ತೆಯಾಗಿದೆ. ಸುತ್ತಮುತ್ತ ಎಷ್ಟೇ ಹುಡುಕಾಡಿದರು ಮಗು ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾನ್ಸ್‌ಟೇಬಲ್ ಬರ್ಬರ ಹತ್ಯೆ

ಈ ಬಗ್ಗೆ ಸೂರ್ಯನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರ ಪರಿಶೀಲನೆ ವೇಳೆ ಮನೆಯ ಸಿಂಟೆಕ್ಸ್ ನೀರಿನ ಟ್ಯಾಂಕ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಪೋಷಕರು ಅಂತರ್ಜಾತಿ ವಿವಾಹವಾಗಿದ್ದರು. ಅಂತರ್ಜಾತಿ ವಿವಾಹದ ವೈಷಮ್ಯಕ್ಕೆ ಮಗುವನ್ನು ಕೊಂದಿರುವ ಆರೋಪ ಮಾಡಲಾಗಿದೆ. ಈ ಬಗ್ಗೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಪ್ರಧಾನಿ ಮೋದಿ ಖಂಡನೆ

Share This Article