ಆನೇಕಲ್| ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ಚಾಲಕ ಪಾರು

Public TV
1 Min Read

ಆನೇಕಲ್: ಕಾರಿನ ಎಂಜಿನ್‌ನಲ್ಲಿ (Car Engine) ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಗೋಪಸಂದ್ರ (Gopasandra) ಗೇಟ್ ಬಳಿ ನಡೆದಿದೆ.

ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನೇಕಲ್‌ನ ಗೋಪಸಂದ್ರದಿಂದ ಮುತ್ತಾನಲ್ಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ, ನಿಮ್ಮ ಜೊತೆ ಶಾಶ್ವತವಾಗಿ ಇರ್ತೇನೆ: ನಿಖಿಲ್ ಭರವಸೆ

ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!

Share This Article