ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ – ವಕ್ಫ್‌ ಅಧಿಕಾರಕ್ಕೆ ಹೈಕೋರ್ಟ್‌ ತಡೆ

By
1 Min Read

ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್‌ ಮಂಡಳಿಗೆ ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಸರ್ಕಾರದ ಆದೇಶವನ್ನು ಅಮಾನತಿನಲ್ಲಿರಿಸಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶವನ್ನು ಜ.7 ರ ವರೆಗೆ ಅಮಾನತು ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಅಲ್ಲದೇ, ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಗೆ ಕೋರ್ಟ್‌ನಿಂದ ನೋಟಿಸ್ ಜಾರಿ ಮಾಡಲಾಗಿದೆ.

ವಕ್ಫ್‌ ಕಾಯಿದೆ 1995 ಕ್ಕೆ ವಿರುದ್ಧವಾಗಿದೆ ಎಂದು ಅಲಂ ಪಾಷ ಅವರು ಪಿಎಎಲ್ ಹಾಕಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.

Share This Article