ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ

Public TV
0 Min Read

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಬಿಜೆಪಿ (BJP) ನೇತೃತ್ವದ ಮಹಾಯುತಿ (Mahayuti) ಒಕ್ಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಬೆಳಗ್ಗೆ 10:30ರ ಟ್ರೆಂಡ್‌ ಪ್ರಕಾರ 223 ಕ್ಷೇತ್ರಗಳಲ್ಲಿ ಮಹಾಯುತಿ ಮುನ್ನಡೆ ಸಾಧಿಸಿದ್ದರೆ ಮಹಾವಿಕಾಸ ಅಘಾಡಿ (Maha Vikas Aghadi) ಒಕ್ಕೂಟ 54 ಕ್ಷೇತ್ರಗಳು, ಇತರರು 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಮಹಾರಾಷ್ಟ್ರದಲ್ಲಿ ಒಟ್ಟು 288 ಕ್ಷೇತ್ರಗಳು ಇದ್ದು ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಬಹುತೇಕ ಸಮೀಕ್ಷೆಗಳು ಮಹಾಯುತಿ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಹೇಳಿದ್ದವು.

Share This Article