ಬಳ್ಳಾರಿ ಸಿಸೇರಿಯನ್‌ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ

Public TV
1 Min Read

ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರ (Pregnant) ಸಾವು ಪ್ರಕರಣ ಮಾಸುವ ಮುನ್ನ ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ.

ಹೊಸಪೇಟೆ ಮೂಲದ ಮುಸ್ಕಾನ್ (22) ಸಾವನ್ನಪ್ಪಿದ್ದಾರೆ. ಈ ಮೂಲಕ 15 ದಿನಗಳ ಅಂತರದಲ್ಲಿ ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮುಸ್ಕಾನ್ ಮೃತಪಟ್ಟಿದ್ದಾರೆ.

 

ನ.10 ರಂದು ಮುಸ್ಕಾನ್ ಜಿಲ್ಲಾಸ್ಪತ್ರೆಯಲ್ಲಿ ಸಿಸೀರಿಯನ್‌ ಮಾಡಿಸಿಕೊಂಡಿದ್ದರು. ಸಿಸೇರಿಯನ್‌ ಬಳಿಕ ಮುಸ್ಕಾನ್‌ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿತ್ತು. ಬಳಿಕ 11 ರಂದು ಬಿಮ್ಸ್ (BIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್‌ ದುರಂತ – ಮೂವರ ಸಾವಿಗೆ IV Fluid ಔಷಧಿಯೇ ಕಾರಣ? ಇನ್ನೂ ಬಳ್ಳಾರಿಗೆ ಭೇಟಿ ನೀಡಿಲ್ಲ ಜಮೀರ್‌ ಅಹ್ಮದ್‌

ಬಿಮ್ಸ್ ನಲ್ಲಿ ಒಂದು ದಿನ ಇದ್ದು ಚಿಕಿತ್ಸೆ ಪಡೆದಿದ್ದ ಮುಸ್ಕಾನ್, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಮಾಡಿಸಲು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸತತ 15 ದಿನ ಚಿಕಿತ್ಸೆ ಪಡೆದರೂ ಮುಸ್ಕಾನ್ ಬದುಕಲಿಲ್ಲ.

ಈ ಮೊದಲು ಲಲಿತಮ್ಮ, ನಂದಿನಿ, ರೋಜಾ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

 

Share This Article