ಶಿವಮೊಗ್ಗ | ರೌಡಿಶೀಟರ್‌ ಹತ್ಯೆ ಕೇಸ್‌ – ನಾಲ್ವರು ಆರೋಪಿಗಳು ಅರೆಸ್ಟ್‌

Public TV
1 Min Read

ಶಿವಮೊಗ್ಗ: ಬೊಮ್ಮನಕಟ್ಟೆ ಬಡಾವಣೆಯಲ್ಲಿ ರೌಡಿಶೀಟರ್ ರಾಜೇಶ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಗಣೇಶ್, ಕಿರಣ್ ಗೌಡ, ನಾಗರಾಜ್, ವೆಂಕಟೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ದೀಪು ಹಾಗೂ ವಿನಯ್ ತಲೆಮರೆಸಿಕೊಂಡಿದ್ದಾರೆ. ಉಳಿದ ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಮೇಲ್ನೋಟಕ್ಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಬೇಕರಿ ಬಳಿ ಜ್ಯೂಸ್ ಕುಡಿಯುತ್ತಾ ಕುಳಿತಿದ್ದ ರೌಡಿಶೀಟರ್ ರಾಜೇಶ್ ಶೆಟ್ಟಿಯನ್ನು ನ.30 ರಂದು ಆರೇಳು ಮಂದಿ ಸೇರಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article