Kolar| ಜಡಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ – ಜಂಟಿ ಸಮೀಕ್ಷೆ ನಡೆಸಿ ಪರಿಹಾರಕ್ಕೆ ಕ್ರಮ

Public TV
1 Min Read

ಕೋಲಾರ: ಫೆಂಗಲ್ ಚಂಡಮಾರುತ (Fengal Cyclone) ಹಿನ್ನೆಲೆ ಕೋಲಾರದಲ್ಲಿ (Kolar) ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು  ಹಾನಿಯಾಗಿದೆ.

ಜಡಿ ಮಳೆಯಿಂದಾಗಿ (Rain) ರೈತರು ಬೆಳೆದಿದ್ದ ರಾಗಿ, ಅವರೆಕಾಯಿ, ಹೂಕೋಸು, ಹೂವು ಸೇರಿದಂತೆ ಸಾಕಷ್ಟು ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಇದರಿಂದ ರೈತರು ಕಂಗಾಲಾಗಿದ್ದರಲ್ಲದೆ, ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದರು. ಮಳೆ ಹಾನಿಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರು. ಇದರಿಂದ ಎಚ್ಚೆತ್ತ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ (Akram Pasha) ಕೂಡಲೇ ಬೆಳೆ ಹಾನಿ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ, ಕಂದಾಯ ಇಲಾಖೆ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಬೆಳೆ ಸಮೀಕ್ಷೆಗೆ ತಿಳಿಸಲಾಗಿದೆ. ಮಳೆ ನಿಂತ ತಕ್ಷಣ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ರಾಜ್ಯ ಸರ್ಕಾರಕ್ಕೆ ಬೆಳಹಾನಿ ಮಾಹಿತಿ ಒದಗಿಸಲಾಗುವುದು, ನಂತರ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ, ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಲಾಗುವುದು ಎಂದು  ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸಿಪಿವೈ ಗೆದ್ರೆ ಡಿಕೆಶಿ ಸಿಎಂ ಆಗ್ತಾರೆ ಅಂದ್ರು ಈಗೇನು ಮಾಡ್ತಾರೆ: ಛಲವಾದಿ ಪ್ರಶ್ನೆ

Share This Article