ಬಾಕ್ಸಾಫೀಸ್‌ನಲ್ಲಿ ಬಂಗಾರದ ಬೆಳೆ ತೆಗೆದ ‘ಪುಷ್ಪ 2’- 500 ಕೋಟಿ ಬಾಚಿದ ಅಲ್ಲು ಅರ್ಜುನ್ ಸಿನಿಮಾ

Public TV
1 Min Read

ಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಡಿ.5ರಂದು ರಿಲೀಸ್ ಆಗಿ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ರೂ. ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 3 ದಿನಕ್ಕೆ ಬಂಗಾರದ ಬೆಳೆ ತೆಗೆಯುತ್ತಿರುವ ‘ಪುಷ್ಪ 2’ ಚಿತ್ರ 500 ಕೋಟಿ ರೂ. ಗಳಿಕೆ ಮಾಡಿ ಮುನ್ನುಗ್ಗುತ್ತಿದೆ. ಈ ವಿಚಾರವನ್ನು ಸ್ವತಃ ನಿರ್ಮಾಣ ಸಂಸ್ಥೆ ತಿಳಿಸಿದೆ.

ಬಹುಭಾಷೆಗಳಲ್ಲಿ ‘ಪುಷ್ಪ 2’ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಇದೀಗ ಈ ಚಿತ್ರ ವಿಶ್ವಾದ್ಯಂತ 500 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಿರ್ಮಾಣ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ:ಪಂಜಾಬಿ ಗಾಯಕ ದಿಲ್ಜಿತ್‌ಗೆ ಕನ್ನಡ ಕಲಿಸಿದ ದೀಪಿಕಾ ಪಡುಕೋಣೆ

 

View this post on Instagram

 

A post shared by Mythri Movie Makers (@mythriofficial)

ಇನ್ನೂ ಅಲ್ಲು ಅರ್ಜುನ್ ನಟನೆ ಮತ್ತು ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ ಫ್ಯಾನ್ಸ್‌ಗೆ ಇಷ್ಟವಾಗಿದೆ. ಶ್ರೀವಲ್ಲಿಯಾಗಿ ರಶ್ಮಿಕಾ ನಟನೆಯನ್ನು ಅಭಿಮಾನಿಗಳು ಕೊಂಡಾಡಿದ್ದಾರೆ. ಶ್ರೀಲೀಲಾ ಕಿಸ್ಸಿಕ್ ಸಾಂಗ್, ಫಹಾದ್ ಫಾಸಿಲ್ ನಟನೆ, ಪುಷ್ಪರಾಜ್ ಜೊತೆಗಿನ ತಾರಕ್ ಪೊನ್ನಪ್ಪ ಸಂಘರ್ಷ ಇವೆಲ್ಲವೂ ಸಿನಿಮಾದಲ್ಲಿ ಹೈಲೆಟ್ ಆಗಿದೆ. ಸುಕುಮಾರ್ ನಿರ್ದೇಶನವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಅಂದಹಾಗೆ, ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಡಾಲಿ, ತಾರಕ್, ಅನಸೂಯ, ಜಗಪತಿ ಬಾಬು ಸೇರಿದಂತೆ ಅನೇಕರು ನಟಿಸಿದ್ದಾರೆ.

Share This Article