ರಾಜ್ಯದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ – ಹರಿಯಾಣ ಸಿಎಂ ಖಡಕ್ ವಾರ್ನಿಂಗ್

Public TV
1 Min Read

ಚಂಡೀಗಢ: ಹರಿಯಾಣದಲ್ಲಿ (Haryana) ಅಪರಾಧಿಗಳಿದೆ ಜಾಗವಿಲ್ಲ ಎಂದು ಗುರುಗ್ರಾಮ್ ಬಾಂಬ್ ಸ್ಫೋಟದ (Gurugram Bomb Attack) ವಿಚಾರವಾಗಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ (Nayab Saini) ಹೇಳಿದರು.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಸಹಚರ ರೋಹಿತ್ ಗೋಡಾರಾ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತ ಬಳಿಕ ಹರಿಯಾಣ ಸಿಎಂ ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸ್ಫೋಟದ ಹಿಂದೆ ಯಾರ ಕೈವಾಡವಿದ್ದರೂ ಅವರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಯಾರೇ ಆಗಲಿ ಕಾನೂನು ಹಾಗೂ ಸುವ್ಯವಸ್ಥೆಯೊಂದಿಗೆ ಆಟವಾಡಿದರೆ ಅವರು ಒಂದು ಆಸ್ಪತ್ರೆಯಲ್ಲಿ ಇರಬೇಕು, ಇಲ್ಲವಾದರೆ ಜೈಲಿನಲ್ಲಿ ಇರುತ್ತಾರೆ ಎಂದು ಕಿಡಿಕಾರಿದರು.

ಈ ಮೂಲಕ ಗುರುಗ್ರಾಮ್‌ನ್ನು ಸ್ವಚ್ಛ ಹಾಗೂ ಸುಂದರ ಜಿಲ್ಲೆಯಾಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜೊತೆಗೆ ಬರುವ ದಿನಗಳಲ್ಲಿ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಏನಿದು ಘಟನೆ?
ಮಂಗಳವಾರ (ಡಿ.10) ಗುರುಗ್ರಾಮ್ ಸೆಕ್ಟರ್ 29ರ ಬಾರ್‌ನ ಹೊರಗೆ ಆರೋಪಿ ಎರಡು ಬಾಂಬ್‌ಗಳನ್ನ ಸ್ಫೋಟಿಸಿದ್ದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುರುಗ್ರಾಮ್ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು

Share This Article