ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಖದೀಮ

Public TV
1 Min Read

ಮಂಗಳೂರು: ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಮಂಗಳೂರಿನ (Mangaluru) ಕಂಕನಾಡಿಯಲ್ಲಿ ನಡೆದಿದೆ.

ಕಾರಿನ ಗಾಜು ಒಡೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಯನ್ನು 24 ಗಂಟೆಯೊಳಗೆ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಡ್ಯಾರು ನಿವಾಸಿ ಅಬ್ದುಲ್ ರೆಹಮಾನ್ ಬಂಧಿತ ಆರೋಪಿ.

ಕಂಕನಾಡಿ ಮಾರ್ಕೆಟ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನ ಗಾಜನ್ನು ಒಡೆದ ಆರೋಪಿ ಕಾರಿನೊಳಗಿದ್ದ ವ್ಯಾನಿಟಿ ಬ್ಯಾಗ್ ಹಾಗೂ ಲ್ಯಾಟ್‌ಟಾಪನ್ನು ಕದ್ದು ಪರಾರಿಯಾಗಿದ್ದ. ಬ್ಯಾಗ್‌ನಲ್ಲಿದ್ದ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್‌ಟಾಪ್ ಕಳವು ಮಾಡಿದ್ದು, ಪೊಲೀಸರು ಎಲ್ಲವನ್ನ ವಶಪಡಿಸಿಕೊಂಡಿದ್ದಾರೆ.

ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ಆರೋಪಿ ಅಂಗಡಿಯೊಂದರಲ್ಲಿ ಸಿಗರೇಟು ಖರೀದಿಸಿ ಬಳಿಕ ಕಳವು ಮಾಡಿದ್ದು, ಈ ಎಲ್ಲಾ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಈ ದೃಶ್ಯದ ಸಹಾಯದಿಂದ ಆರೋಪಿಯನ್ನ ಬಂಧಿಸಿದ್ದಾರೆ. ಕದ್ರಿ ಠಾಣಾ ಇನ್‌ಸ್ಪೆಕ್ಟರ್ ಸೋಮಶೇಖರ್ ಹಾಗೂ ಪಿಎಸ್‌ಐ ಉಮೇಶ್ ನೇತೃತ್ವ ತಂಡ ಕಾರ್ಯಾಚರಣೆ ನಡೆಸಿದೆ.

Share This Article