UI ಫ್ಯಾನ್ಸ್‌ಗೆ ಉಪ್ಪಿ ಪ್ರಶ್ನೆ- ಕೊನೆಯ ಶಾಟ್ ಡಿಕೋಡ್ ಮಾಡಿ ಎಂದ ನಟ

Public TV
2 Min Read

ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ‘ಯುಐ’ (UI) ಸಿನಿಮಾ ಇಂದು (ಡಿ.20) ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಈ ಸಿನಿಮಾ ನಟ ಮತ್ತೆ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿರೋದಂತೂ ಗ್ಯಾರಂಟಿ. ‘ಯುಐ’ ರಿಲೀಸ್ ಬಳಿಕ ಫ್ಯಾನ್ಸ್ ಮುಂದೆ ನಟ ಪ್ರಶ್ನೆ ಇಟ್ಟಿದ್ದಾರೆ. ಕೊನೆಯ ಶಾಟ್ ಅನ್ನು ಡಿಕೋಡ್ ಮಾಡಿ ಎಂದು ಸವಾಲೆಸೆದಿದ್ದಾರೆ.

ಕಾತುರದಿಂದ ಕಾಯುತ್ತಿದ್ದೇನೆ. ಯುಐ ಚಿತ್ರದ ಎಷ್ಟು ಸೀನ್‌ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತೀರಾ ಎಂದು ಪ್ರಶ್ನಿಸಿ ಉಪೇಂದ್ರ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.‌ ಇದನ್ನೂ ಓದಿ:ವ್ಯವಹಾರದಲ್ಲಿ ಲಾಸ್‌ ಆಗಿದ್ದಕ್ಕೆ ಬಿಗ್‌ ಬಾಸ್‌ನಿಂದ ನಿರ್ಗಮಿಸಿದ್ರಾ?: ಗೋಲ್ಡ್‌ ಸುರೇಶ್ ಸ್ಪಷ್ಟನೆ

ಯುಐ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಪ್ರೇಕ್ಷಕರಿಂದ ರೆಸ್ಪಾನ್ಸ್ ಬಂದಿದೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ಕೊಟ್ಟಿದ್ದಾರೆ. ಉಪೇಂದ್ರ ನಟನೆ, ನಿರ್ದೇಶನಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.

ಇನ್ನೂ 2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

Share This Article