ಕಾಂಗ್ರೆಸ್ ಸಭ್ಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುತ್ತಿದೆ: ಜೋಶಿ ಅಸಮಾಧಾನ

Public TV
1 Min Read

ಹುಬ್ಬಳ್ಳಿ: ಪರಿಷತ್ ಸದಸ್ಯ ಸಿಟಿ ರವಿ ಬಂಧನ ವಿಚಾರವಾಗಿ ಕಾಂಗ್ರೆಸ್ ದೇಶದಲ್ಲಿ ಶಾಂತಿ-ಸುವ್ಯವಸ್ಥೆ ಹಾಳು ಮಾಡುತ್ತಿದೆ. ಸಭ್ಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇಂತಹ ಘಟನೆಗಳು ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ಹೊರಹಾಕಿದ್ದಾರೆ.

ರಾಹುಲ್ ಗಾಂಧಿ ಅವರು ನಿನ್ನೆ ಬೆಳಗ್ಗೆ ದೆಹಲಿಯಲ್ಲಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಗಾಯ ಮಾಡಿದ್ದಾರೆ. ರಾತ್ರಿ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಮಾರಣಾಂತಿಕ ಹಲ್ಲೆ. ಒಬ್ಬ ಜನಪ್ರತಿನಿಧಿಯ ವಿರುದ್ಧ ಕಾಂಗ್ರೆಸ್ ಸರ್ಕಾರ ಈ ರೀತಿ ವರ್ತಿಸುತ್ತಿರುವುದು ಖಚಿತವಾಗಿದೆ. ದುರಹಂಕಾರದ ಪರಮಾವಧಿ ಕಾಂಗ್ರೆಸ್ ಪಕ್ಷಕ್ಕೆ ಸಾಕ್ಷಿಯಾಗಿದೆ ಎಂದು ಜೋಶಿ ಕಿಡಿಕಾರಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌, ಬಿಡುಗಡೆಗೆ ಆದೇಶ ಹೊರಡಿಸಿತು. ನಂತರ ದಾವಣಗೆರೆಯಲ್ಲಿ ಬಿಜೆಪಿ ನಾಯಕನನ್ನು ಪೊಲೀಸರು ಬಿಡುಗಡೆ ಮಾಡಿದರು.

Share This Article