ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

Public TV
2 Min Read

ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ (Amit Shah) ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

ವಿಧಾನಸಭಾ ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.

ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್‌ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.

ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

Share This Article