ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ಸರ್ಪ್ರೈಸ್ ಗಿಫ್ಟ್ ನೀಡಿದ ತಲೈವಾ, ಶಿವಕಾರ್ತಿಕೇಯನ್

By
1 Min Read

ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ (D Gukesh) ಇಂದು (ಡಿ.26) ರಜನಿಕಾಂತ್ (Rajinikanth) ಮತ್ತು ‘ಅಮರನ್’ ನಟ ಶಿವಕಾರ್ತಿಕೇಯನ್ (Sivakarthikeyan) ಅವರನ್ನು ಭೇಟಿಯಾಗಿದ್ದಾರೆ. ಭಾರತಕ್ಕೆ ಹೆಮ್ಮೆ ತಂದಿರುವ ಗುಕೇಶ್ ಸಾಧನೆಯನ್ನು ಕೊಂಡಾಡಿ ತಲೈವಾ ಮತ್ತು ಶಿವಕಾರ್ತಿಕೇಯನ್ ಶುಭಹಾರೈಸಿದ್ದಾರೆ.

ಗುಕೇಶ್ ತಮ್ಮ ಪೋಷಕರೊಂದಿಗೆ ರಜನಿಕಾಂತ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ, ತಲೈವಾ ಗುಕೇಶ್‌ಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಪುಸ್ತಕವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ ತಲೈವಾ. ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ‘ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಾರೈಕೆಗಳಿಗೆ ಧನ್ಯವಾದಗಳು. ನಮ್ಮನ್ನು ಮನೆಗೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯವಾದ ಸಮಯ ಕಳೆದು, ಜ್ಞಾನ ಹಂಚಿಕೊಂಡಿದ್ದಕ್ಕೆ ಧನ್ಯವಾದ ಸರ್’ ಎಂದು ಗುಕೇಶ್ ಬರೆದುಕೊಂಡಿದ್ದಾರೆ.

ಬಳಿಕ ‘ಅಮರನ್’ ನಟ ಶಿವಕಾರ್ತಿಕೇಯನ್ ಅವರ ನಿವಾಸಕ್ಕೆ ಗುಕೇಶ್ ಫ್ಯಾಮಿಲಿ ಭೇಟಿ ಮಾಡಿದ್ದಾರೆ. ವಿಶ್ವ ಚೆಸ್ ಚಾಂಪಿಯನ್ (Chess Champion) ಆಗಿ ಗೆದ್ದ ಖುಷಿಯನ್ನು ನಟನೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಬಳಿಕ ಗುಕೇಶ್‌ಗೆ ದುಬಾರಿ ವಾಚ್‌ವೊಂದನ್ನು ಶಿವಕಾರ್ತಿಕೇಯನ್ ಉಡುಗೊರೆಯಾಗಿ ನೀಡಿದ್ದಾರೆ.

Share This Article