ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

Public TV
1 Min Read

ಬೆಂಗಳೂರು: ಸಾರಿಗೆ ಮುಷ್ಕರ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಎಂಡಿಗಳ ಜೊತೆ ಸಭೆ ನಡೆಸಿದ್ರು.

ಸಾರಿಗೆ ಸಂಘಟನೆಗಳ ಬೇಡಿಕೆಗಳನ್ನು ಸಿಎಂಗೆ ಸಾರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು. ಸಭೆ ಬಳಿಕ ಮಾತಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ, ಬಿಜೆಪಿ ಸರ್ಕಾರ 5,900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ. ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸಂಕ್ರಾಂತಿ ನಂತರ ಸಿಎಂ ಜೊತೆ ಸಭೆ ಮಾಡ್ತೇವೆ ಎಂದರು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

ಸಿಎಂ 2,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಬಜೆಟ್‌ನಲ್ಲಿ ಉಳಿದ ಮೊತ್ತ ಕೊಡ್ತಾರೆ. ಪ್ರಣಾಳಿಕೆಯಲ್ಲೂ ಸಮಾನ ವೇತನ ಅಂತ ಹೇಳಿದ್ದೇವೆ. ಬಸ್ ನಿಲ್ಲಿಸಬಾರದು. ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಡಿ ಅಂತ ಮನವಿ ಮಾಡಿದರು. ಅಲ್ಲದೇ, ಟಿಕೆಟ್ ದರ ಏರಿಕೆ ಬಗ್ಗೆ ಸಲಹೆ ಕೊಡಬಹುದು. ಎಷ್ಟು ಏರಿಕೆ ಮಾಡ್ಬೋದು ಅಂತ 4 ಬೋರ್ಡ್‌ಗಳು ಪ್ರಸ್ತಾವನೆ ಸಲ್ಲಿಸಬಹುದು. ನಾಳೆ (ಸೋಮವಾರ) ಜಂಟಿ ಕ್ರಿಯಾ ಸಮಿತಿ ಜೊತೆ ಸಿಎಂ ಮಾತುಕತೆ ನಡೆಸ್ತಾರೆ ಅಂತ ರಾಮಲಿಂಗಾರೆಡ್ಡಿ ಹೇಳಿದ್ರು. ಈ ಮಧ್ಯೆ, ಸಾರಿಗೆ ಬಂದ್‌ಗೆ ಬಿಜೆಪಿ ಕೂಡ ಬೆಂಬಲ ನೀಡಿದೆ.

ಇನ್ನೂ ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ಟೀಕೆ ಮಾಡ್ತಿದ್ದಾರೆ. ಅವರು ಸಾವಿರಾರು ಜನರನ್ನ ಸಸ್ಪೆಂಡ್ ಮಾಡಿದ್ದರು. ನಾವು ಅವರನ್ನೆಲ್ಲಾ ಮತ್ತೆ ಕೆಲಸಕ್ಕೆ ಸೇರಿಸಿಕೊಂಡಿದ್ದೇವೆ ಎಂದು ಸಚಿವರು ತಿರುಗೇಟು ನೀಡಿದರು. ಇದನ್ನೂ ಓದಿ: ಹೋಟೆಲ್, ರೆಸಾರ್ಟ್‌ನವರು ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ: ಡಿಕೆಶಿ‌ ವಾರ್ನಿಂಗ್‌

Share This Article